ಬೆಳಗಾವಿ- ಲೋಕಸಭೆ ಚುನಾವಣೆಗೆ ದೇಶದಲ್ಲೇ ಈಗ ಅಖಾಡಾ ರೆಡಿಯಾಗುತ್ತಿದೆ.ಹೀಗಾಗಿ ಬೆಳಗಾವಿಯಲ್ಲೂ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ.ಬೆಳಗಾವಿ ಲೋಕಸಭೆ ಚುನಾವಣೆಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃನಾಲ ಹೆಬ್ಬಾಳಕರ್ ಅವರನ್ನು ಕಣಕ್ಕಿಳಿಸುವ ಚರ್ಚೆ ಜೋರಾಗಿಯೇ ನಡೆದಿದೆ.
ಬೆಳಗಾವಿ ಲೋಕಸಭಾ ಮತಕ್ಷೇತ್ರ ಬಿಜೆಪಿ ಹಿಡಿತದಲ್ಲಿದ್ದು ಇದನ್ನು ಮರಳಿ ಪಡೆಯಲು ಕಾಂಗ್ರೆಸ್ ಪ್ರಭಾವಿ ನಾಯಕನನ್ನು ಕಣಕ್ಕಿಳಿಸಲು ಚಿಂತನೆ ಆರಂಭಿಸಿದ್ದು ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲೇ ರಾಜಕೀಯದಲ್ಲಿ ಅತೀ ವೇಗವಾಗಿ ಪಾಪುಲರ್ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃನಾಲ ಹೆಬ್ಬಾಳಕರ್ ಅವರ ಪುತ್ರನನ್ನು ಕಣಕ್ಕಿಳಿಸಿ ಬಿಜೆಪಿಗೆ ಸಮಬಲದ ಟಲ್ಕರ್ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ,ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮೃನಾಲ ಹೆಬ್ಬಾಳಕರ್ ಈ ಇಬ್ಬರು ಪ್ರಭಾವಿ ಅಭ್ಯರ್ಥಿ ಗಳನ್ನು ಕಣಕ್ಕಿಳಿಸಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಕಾಂಗ್ರೆಸ್ ನಾಯಕರು ತಂತ್ರ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದ್ದು ಇದಕ್ಕೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃನಾಲ ಹೆಬ್ಬಾಳಕರ್ ಅವರನ್ನು ಕಣಕ್ಕಿಳಿಸಲು ಲಕ್ಷ್ಮೀ ಹೆಬ್ಬಾಳಕರ್ ನಿರಾಕರಿಸಿದ್ದಲ್ಲಿ ಪರ್ಯಾಯ ಅಭ್ಯರ್ಥಿಯ ಬಗ್ಗೆ ಚಿಂತನೆ ಶುರುವಾಗಲಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಸುಪುತ್ರ ಮೃನಾಲ ಅವರನ್ನು ಕಣಕ್ಕಿಳಿಸಲು ಒಪ್ಪಿದ್ರೆ ಅವರೇ ಅಭ್ಯರ್ಥಿ ಆಗೋದು ಖಚಿತ ಎಂದು ಹೇಳಲಾಗುತ್ತಿದ್ದು.ಈ ಕುರಿತು ಲಕ್ಷ್ಮೀ ಹೆಬ್ಬಾಳಕರ್ ತಮ್ಮ ವೈಯಕ್ತಿಕ ನಿಲುವು ಪ್ರಕಟಿಸಿದ ಬಳಿಕವೇ ಆಂತರಿಕವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಚರ್ಚೆಗೆ ಬರುವ ಸಾಧ್ಯತೆಗಳಿವೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪುತ್ರಿ ಪ್ರೀಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಕುರಿತು ತಮ್ಮ ಅಭಿಪ್ರಾಯವನ್ನು ಮಾದ್ಯಮಗಳ ಎದುರು ಹಂಚಿಕೊಂಡಿದ್ದು ಈಗ ಮೃನಾಲ ಹೆಬ್ಬಾಳಕರ್ ಅವರನ್ನು ಕಣಕ್ಕಿಳಿಸುವ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ನಿಲುವು ಪ್ರಕಟಿಸುವದಷ್ಟೇ ಬಾಕಿ ಇದೆ.
ಈಗ ಸದ್ಯಕ್ಕೆ ಎಲ್ಲ ನಾಯಕರು ಅಧಿವೇಶನದಲ್ಲಿ ಬ್ಯುಸಿ ಆಗಿದ್ದು,ಅವರೆಲ್ಲರೂ ಅಧಿವೇಶನ ಮುಗಿಸಿ ಬೆಳಗಾವಿಗೆ ಮರಳಿದ ಬಳಿಕ ಎಂಪಿ ಇಲೆಕ್ಷನ್ ಬಗ್ಗೆ ಚರ್ಚೆಗಳು ಬಹಿರಂಗವಾಗಿ ನಡೆಯುವ ಎಲ್ಲ ಲಕ್ಷಣಗಳು ಕಂಡು ಬಂದಿವೆ.