ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ
ಬೆಳಗಾವಿ, -: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ