Breaking News
Home / Breaking News / ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬಂದ್ದಿದ್ರು ಏನ್ ಹೇಳಿದ್ರು ಗೊತ್ತಾ..??

ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬಂದ್ದಿದ್ರು ಏನ್ ಹೇಳಿದ್ರು ಗೊತ್ತಾ..??

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಾದ್ಯಮಗಳ ಜೊತೆ ಮಾತನಾಡಿ,ಸಿದ್ರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು.

ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಠಿಯಿಂದ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ.ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ,ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ,ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.

ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ಪರಿಹಾರ ಕೊಡಬೇಕು, ಅದು ಸಾಧ್ಯವಾಗಿಲ್ಲ,ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ,ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಸರ್ಕಾರ ಇದನ್ನು ಗಮನಿಸುತ್ತಿಲ್ಲ,ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ,ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ,ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ,ತಮ್ಮ ಸ್ಥಾನವನ್ನು ಉಳಿಸಿ ಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು.

ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ,ರಾಜ್ಯ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ,ಕೂಡಲೇ ಎಲ್ಲ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು,ಸಾವು ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸುವೆ,ನಮ್ಮ ಸರ್ಕಾರದ ಸಮಯದಲ್ಲಿ ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ ಆ ರೀತಿಯ ಮಾನದಂಡ ಅನುಸರಿಸಿ ಈಗಲೂ ಪರಿಹಾರ ನೀಡಬೇಕು ಎಂದು ಒತ್ತಾಯಿಸದರು.

ತಕ್ಷಣವೇ ಸಂತ್ರಸ್ತರಿಗೆ 10 ಸಾವಿರ ಪರಿಹಾರ ಕೊಡಬೇಕು,ಕೇಂದ್ರ ‌ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ಬೆಲೆ ಪರಿಹಾರ ನಾವು ಕೊಟ್ಟಂಗೆ ಈಗಲೂ ಕೊಡಬೇಕು,2600 ಕೋಟಿ ಪರಿಹಾರ ನಾವು ಒಂದೇ ತಿಂಗಳಲ್ಲಿ ನೀಡಿದ್ದೇವೆ,ಕೇಂದ್ರ ಸರ್ಕಾರ ಒಣ ಬೇಸಾಯಕ್ಕರ 6500 ಪರಿಹಾರ ನೀಡಿತ್ತು, ನಾವು ಅದಕ್ಕೆ 1300 ಸಾವಿರ ನೀಡಿದ್ವಿ,ನೀರಾವರಿ ಆಧಾರಿತ ಜಮೀನಿಗೆ 1500 ಸಾವಿರ ನೀಡಿದ್ರೆ ನಾವು 25000 ಪರಿಹಾರ ನೀಡಿದ್ವಿ,ತೋಟಗಾರಿಕೆ ಬೆಳೆಗಳಿಗೆ ಕೇಂದ್ರ 18 ಸಾವಿರ ನೀಡಿದ್ರೆ ನಾವು 28 ಸಾವಿರ ಪರಿಹಾರ ಕೊಟ್ಟಿದ್ವಿ,ಅದೇ ಮಾನದಂಡ ಅನುಸರಿಸಿ ಈಗಲೂ ರೈತರಿಗೆ ಪರಿಹಾರ ಕೊಡಬೇಕು,ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಬೇಕು,ನಮ್ಮ ಅನುಭವದಿಂದ ಹೇಳುತ್ತಿದ್ದೇನೆ, ತಕ್ಷಣವೇ ಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು,ಹಾಗಾದಿದ್ದರೆ ಈ ಸರ್ಕಾರ ಇದ್ದರೆಷ್ಟು, ಬಿಟ್ಟರೆಷ್ಟು ಎಂದು ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ನಾವು ಎಸ್‌ಡಿಆರ್‌ಎಫ್ ಪರಿಹಾರ ಜೊತೆಗೆ ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ,ಐದು ಲಕ್ಷ ಪರಿಹಾರ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಿಸಲು ಅನುಕೂಲ ಮಾಡಿದ್ದೇವೆ,ಬಿಎಸ್‌ವೈ ನೇತೃತ್ವದಲ್ಲಿ ತೀರ್ಮಾನ ತೆಗೆದುಕೊಂಡು ಈ ಕ್ರಮ ಕೈಗೊಂಡಿದ್ದೇವೆ.ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ, ಅಲ್ಪ ಬಿದ್ದ ಮನೆಗಳಿಗೆ 3 ಲಕ್ಷ ಪರಿಹಾರ ಕೊಟ್ಟಿದ್ದೇವೆ.ಸಂಕಷ್ಟದಲ್ಲಿರುವ ಪ್ರವಾಹಪೀಡಿತರ ನೆರವಿಗೆ ನಾವು ಬಂದಿದ್ದೇವು.ಇಲ್ಲವಾದರೆ ಈ ಸರ್ಕಾರ ಬಡವರಿಗೆ ಅನ್ಯಾಯ ಮಾಡಿದಂಗೆ ಎಂದ ಬೊಮ್ಮಾಯಿ ಆರೋಪಿಸಿದರು.

ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಹಲ್ಲೆ ಕ್ರಮಕ್ಕೆ ಒತ್ತಾಯ.

ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಪೊಲೀಸರ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ,ಸಮಾಜ ಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ.ಭಯ ಹೋಗಿದೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ,ಸಾಮಾನ್ಯ ಜನರ ಮೇಲೆ ಹಲ್ಲೆ, ಹೆಣ್ಣುಮಕ್ಕಳ ಮೇಲೆ ಹಲ್ಲೆ ಆಗುತ್ತದೆ.ಪೊಲೀಸ ಅಧಿಕಾರಿಗಳ ಕೊಲೆ ಆಗುತ್ತದೆ, ಮತ್ತೊಂದೆಡೆ ಪೊಲೀಸರಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ಸಂಪೂರ್ಣ ವಿಫಲವಾಗಿದೆ.ಕೂಡಲೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಎಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದ್ರು.

ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ.

ಈ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ.ಎಂದುಬೆಳಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.ಎಲ್ಲರೂ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ, ಇದಕ್ಕಾಗಿ ಸರ್ಕಾರದಲ್ಲಿ ಪೈಪೋಟಿ ನಡೆತಿದೆ,ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ,ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡಿತಿದೆ ಎಂದು ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದೆ.ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರ ಸಭೆ ಮಾಡುತ್ತೇವೆ.ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ ಎಂದ ಬೊಮ್ಮಾಯಿ ಹೇಳಿದ್ರು.

Check Also

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು …

Leave a Reply

Your email address will not be published. Required fields are marked *