ಬೆಳಗಾವಿ- ನಿನ್ನೆ ಸೋಮವಾರ ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ನಡೆದ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆಯ ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ,ಎಂದು ಆರೋಪಿಸಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಇಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ದೂರು ನೀಡಿದ್ದಾರೆ.
ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಿದ ಸಂಬಂಧಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಹಕ್ಕುಚ್ಯತಿ ಮಂಡಿಸುವ ಕುರಿತು ಸ್ಪೀಕರ್ ಅವರನ್ನು ಶಾಸಕ ಅಭಯ ಪಾಟೀಲ ಸ್ಪೀಕರ್ ಅವರನ್ನು ಭೇಟಿಯಾಗಿ ಅಧಿಕಾರಿಗಳು ಯಾವ ರೀತಿಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎನ್ನುವ ಕುರಿತು ವಿವರಣೆ ನೀಡಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ವಿದ್ಯುತ್ ಉಪ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮಗೆ ಹೆಸ್ಕಾಂ ಅಧಿಕಾರಿಗಳು ಆಮಂತ್ರಣ ನೀಡಿಲ್ಲ.ಕಾರ್ಯಕ್ರಮಕ್ಕೆ ತಮಗೆ ಅಹ್ವಾನ ಇರಲಿಲ್ಲ, ಈ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿದೆ ಎಂದು ಶಾಸಕ ಅಭಯ ಪಾಟೀಲ ಅವರು ಆರೋಪಿಸಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ