Breaking News

ಎರಡನೇಯ ಬಾರಿಗೆ ಸಿಎಂ,ಮೊದಲು ಬಾರಿಗೆ ಬೆಳಗಾವಿಗೆ…

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 11ರಂದು ಸರಕಾರ ರಚನೆ ಬಳಿಕ ಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನ ನಿಲ್ದಾಣದಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮುಖ್ಯಮಂತ್ರಿಗಳು, 11.25ಕ್ಕೆ ಹೆಲಿಕಾಪ್ಟರ್ ಮೂಲಕ ಸಾಂಬ್ರಾ‌ ವಿಮಾನ ನಿಲ್ದಾಣದಿಂದ ಹೊರಟು 12.05ಕ್ಕೆ ಅಥಣಿಯ ಕೆ.ಎಲ್.ಇ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ಬಸವೇಶ್ವರ ಸರ್ಕಲ್ ನಲ್ಲಿ ನಿರ್ಮಿಸಿರುವ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸುವರು.

12.30ಕ್ಕೆ ರಸ್ತೆ ಮೂಲಕ ಕೊಕಟನೂರ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದು, 12.50ಕ್ಕೆ ಕೊಕಟನೂರಿನ ಪಶುವೈದ್ಯಕೀಯ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸುವರು. ಪಶುವೈದ್ಯಕೀಯ ಮಹಾವಿದ್ಯಾಲಯ, ಅಥಣಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವುಗಳ ಆಶ್ರಯದಲ್ಲಿ ಕೊಜಟನೂರ ಗ್ರಾಮದಲ್ಲಿ ವಿವಿಧ ವಿವಿಧ ಇಲಾಖೆಗಳ ಕಾಮಗಾರಿ ಉದ್ಘಾಟನೆ ಹಾಗೂ ಅಡಿಗಲ್ಲು ನೆರವೇರಿಸುವರು.

4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು.

Check Also

46 ಜನ ಎಂಇಎಸ್ ಮುಖಂಡರು ಸೇರಿ 1500 ಜನರ ವಿರುದ್ಧ ಕೇಸ್

ಬೆಳಗಾವಿ – ಕನ್ನಡ ರಾಜ್ಯೋತ್ಸವ ದಿನವೇ ಎಂಇಎಸ ಕರಾಳ ದಿನಾಚರಣೆ ಮಾಡುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ 46 ಜನ ಎಂಇಎಸ …

Leave a Reply

Your email address will not be published. Required fields are marked *