ಬೆಳಗಾವಿ – ರಾಜ್ಯಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕಾ ಶಕ್ತಿ ಯೋಜನೆ ಜಾರಿಗೆ ತಂದಿದ್ದು ,ಈ ಯೋಜನೆ ಶೀಫ್ರದಲ್ಲೇ ಬಂದ್ ಆಗಲಿದೆ ಎಂದು ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದು ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ,ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ನಿಲ್ಲಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ.ಈ ಯೋಜನೆ ಎಂದಿನಂತೆ ಮುಂದುವರೆಯಲಿದೆ. ಯೋಜನೆಯ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುತ್ತೇವೆ.ಮಹಿಳೆಯರ ಬಸ್ ಪ್ರಯಾಣದ ಶಕ್ತಿ ಯೋಜನೆ ಕೆಲವೇ ದಿನಗಳಲ್ಲಿ ರದ್ದಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಗಳನ್ನು ಹರಡಿಸಿ ಮಹಿಳೆಯರ ದಿಕ್ಕು ತಪ್ಪಿಸುವ ಕಾರ್ಯವನ್ನು ಮಾಡುತ್ತಿದ್ದು ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸಾರಿಗೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಯೋಜನೆ ರಾಜ್ಯದಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದು ಸತ್ಯ.
ಹಾಗಾದ್ರೆ ಸುಳ್ಳು ಸುದ್ಧಿಗಳನ್ನು ನಂಬಬೇಡಿ ಉಚಿತ ಬಸ್ ಪ್ರಯಾಣ ಎಂದಿನಂತೆ ಮುಂದುವರೆಸಿ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
