ಬೆಳಗಾವಿ-ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಪ್ರಕಾಶ್ ಹುಕ್ಕೇರಿಯವರು ಅಭಿನಂದನೆ ಸಲ್ಲಿಸಿದರು
ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಅವರಿಗೆ ಸಂಪುಟ ದರ್ಜೆಯ ಸರ್ಕಾರದ ದೆಹಲಿ ಪ್ರತಿನಿಧಿಯ ಸ್ಥಾನ ಸಿಕ್ಕಿರುವ ವಿಚಾರ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ನೀಡಿದೆ.ಪ್ರಕಾಶ್ ಹುಕ್ಕೇರಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ವಿಧಾನ ಪರಿಷತ್ತಿನ ಸದಸ್ಯರಾಗಿರುವ ಪ್ರಕಾಶ್ ಹುಕ್ಕೇರಿ ಅವರು ನಿಷ್ಠಾವಂತ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು,ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆ ಹರಿಸಿದ್ದಾರೆ,ಜನ ಅವರನ್ನು ವರ್ಕರ್ ಪ್ರಕಾಶ ಹುಕ್ಕೇರಿ ಎಂದೇ ಕರೆಯುತ್ತಾರೆ.ಪ್ರಕಾಶ್ ಹುಕ್ಕೇರಿಯವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾಪೂರ ಬಂದಿತ್ತು.ಈ ಸಂಧರ್ಭದಲ್ಲಿ ದಾಖಲೆ ಪ್ರಮಾಣದಲ್ಲಿ ಪರಿಹಾರಧನವನ್ನು ಬೆಳಗಾವಿ ಜಿಲ್ಲೆಗೆ ಮಂಜೂರು ಮಾಡಿಸುವ ಜೊತೆಗೆ, ಬೆಳಗಾವಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿದ್ದು ಪ್ರಕಾಶ್ ಹುಕ್ಕೇರಿ ಅವರು.
ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿಯವರು ಕೇಂದ್ರದಿಂದ ರಾಜ್ಯಕ್ಕೆ ಬರಲಿರುವ ಯೋಜನೆಗಳ ವೇಗವನ್ನು ಹೆಚ್ಚಿಸಿ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರುವದರಲ್ಲಿ ಎರಡು ಮಾತಿಲ್ಲ.