ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು ? ಎನ್ನುವ ಚರ್ಚೆ ಜೋರಾಗಿ ನಡೆದಿದ್ದು ರಮೇಶ್ ಜಾರಕಿಹೊಳಿ ಅಥವಾ ಬಾಲಚಂದ್ರ ಜಾರಕಿಹೊಳಿ ಎನ್ನುವ ಮಾತೇ ಈಗ ಎಲ್ಲೆಡೆ ಕೇಳಿ ಬರುತ್ತಿದೆ.
ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡೋದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಿಲ್ಲುವಂತೆ ಬಿಗ್ ಆಫರ್ ಕೊಟ್ಟಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬೆಳಗಾವಿಯ ದಾನಶೂರ ಕರ್ಣ ಎಂದೇ ಪ್ರಸಿದ್ದಿ ಪಡೆದಿರುವ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಬೆಳಗಾವಿ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಎನ್ನುವ ತಂತ್ರವನ್ನು ಬಿಜೆಪಿ ರೂಪಿಸಿದೆ ಎನ್ನಲಾಗಿದ್ದು,ಬಾಲಚಂದ್ರ ಜಾರಕಿಹೊಳಿ ಅವರೇ ಬೆಳಗಾವಿ ಅಭ್ಯರ್ಥಿ ಎನ್ನುವ ಮಂತ್ರವೂ ಜಪ ಮಾಡಲಾಗುತ್ತಿದೆ. ಒಟ್ಟಾರೆ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ನಾಯಕರು ಈಗಿನಿಂದಲೇ ಮಾಸ್ಟರ್ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ.
ಜಾರಕಿಹೊಳಿ ಬ್ರದರ್ಸ್ ರಮೇಶ್ ಜಾರಕಿಹೊಳಿ ಅಥವಾ ಬಾಲಚಂದ್ರ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸಿದ್ರೆ ಬಿಜೆಪಿ ಸರಳವಾಗಿ ಗೆಲ್ಲಬಹುದು ಎನ್ನುವ ಲೆಕ್ಕಾಚಾರ ಬಿಜೆಪಿ ನಾಯಕರದ್ದಾಗಿದೆ ಎಂದು ಹೇಳಲಾಗುತ್ತಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾನು ಬಿಜೆಪಿ ಬಿಡೋದಿಲ್ಲ ಎನ್ನುವ ಪಕ್ಷನಿಷ್ಠೆಯ ಹೇಳಿಕೆ ನೀಡಿದ್ದರಿಂದ ರಮೇಶ್ ಸಾಹುಕಾರ್ ಈಗ ಮತ್ತೆ ಬಿಜೆಪಿ ಹೈಕಮಾಂಡ್ ಗೆ ಮತ್ತಷ್ಟು ಹತ್ತಿರವಾಗಿದ್ದಾರೆ.