ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದ ನಂತರ ರೇಷನ್ ಕಾರ್ಡ್ ಮಹತ್ವ ಎಲ್ಲರಿಗೂ ಗೊತ್ತಾಗಿದೆ.ರೇಷನ್ ಕಾರ್ಡ್ ಇಲ್ಲದ,ಹಾಗೂ ಇದ್ದರೂ ತಿದ್ದುಪಡಿಯಾಗದೇ ಪರದಾಡುತ್ತಿದ್ದ ಕುಟುಂಬಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯುಸ್ ಕೊಟ್ಟಿದೆ.ಕಾರ್ಡ್ ಪಡೆಯಲು ತಿದ್ದುಪಡಿ ಸರ್ಕಾರ ಅವಕಾಶ ಕಲ್ಪಿಸಿದೆ.ಯಾವ ಜಿಲ್ಲೆಯವರು ಯಾವ ದಿನ ಅರ್ಜಿ ಹಾಕಬೇಕು ಅನ್ನೋದನ್ನು ಸರ್ಕಾರ ಅಧಿಕೃತವಾಗಿ ತಿಳಿಸಲಿದೆ.ಈಗ ಸದ್ಯ ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ದಿನಾಂಕಗಳು ಕೆಳಗಿನಂತಿವೆ,ದಿನಾಂಕಗಳಲ್ಲಿ ಬದಲಾವಣೆ ಆಗುವ ಸಾಧ್ಯತೆಗಳು ಇವೆ.
ಬೆಂಗಳೂರು-ಮೂರು ಹಂತಗಳಲ್ಲಿ ಜಿಲ್ಲಾವಾರು ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಹಾಗಾದರೆ ಪಡಿತರ ಚೀಟಿಯಲ್ಲಿ ಹೆಸರು ತಿದ್ದುಪಡಿ ಕಾರ್ಯ ಯಾವ್ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದವರೆಗೂ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ಆಹಾರ ಇಲಾಖೆಯ ವೆಬ್‌ಸೈಟ್ ಮೇಲೆ ಲೋಡ್ ಹೆಚ್ಚಾದ ಹಿನ್ನೆಲೆ ವೆಬ್‌ಸೈಟ್ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಆಯಾ ಜಿಲ್ಲೆಗಳಿಗೆ ನಿಗದಿತ ದಿನಾಂಕಗಳನ್ನು ನೀಡಲಾಗಿದ್ದು, ಈ ಮೂಲಕ ನೀಡಿರುವ ದಿನಾಂಕದಂದು ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ\ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಪಡಿತರ ಚೀಟಿ ತಿದ್ದುಪಡಿಗೆ ಜಿಲ್ಲಾವಾರು ದಿನಾಂಕಗಳ ವಿವರ
ಬೆಳಗಾವಿ, ಹಾವೇರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಮಂಡ್ಯ, ಉತ್ತರ ಕನ್ನಡ, ವಿಜಯಪುರ, ಮೈಸೂರು, ಕೊಡಗು, ಹಾವೇರಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಜನರು ಸೆಪ್ಟೆಂಬರ್ 12ರಿಂದ 14ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ನೀಡಲಾಗಿದೆ. ಇನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಫಲಾನುಭವಿಗಳಿಗೆ ಸೆಪ್ಟೆಂಬರ್ 9ರಿಂದ ಸೆಪ್ಟೆಂಬರ್ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ಅಂದರೆ ಇಂದಿನಿಂದ ಸೆಪ್ಟೆಂಬರ್ 8ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಪಡಿತರ ಚೀಟಿ ಹೆಸರು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇದರ ಉಪಯೋಗವನ್ನು ಪಡಿತರ ಚೀಟಿದಾರರು ಪಡೆದುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.