ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸ್ವಂತ ವೆಚ್ಚದಲ್ಲಿ ಮೋಡ ಬಿತ್ತನೆ ಮಾಡಲು ಕ್ಯಾತಿ ಕ್ಲೈಮೇಟ್ ಮೋಡಿಫಿಕೇಶನ್ ಕನ್ಸಲ್ಟನ್ಸ್ ನವರು ಬೆಳಗಾವಿ ಸುಗರ್ಸ್ ಪ್ರೈವೆಟ್ ಲಿಮಿಟೆಡ್ ಜೊತೆಗೂಡಿ ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಸಜ್ಜಾಗಿವೆ.
ಈ ನಿಟ್ಟಿನಲ್ಲಿ ಎರಡು ಸಂಸ್ಥೆಗಳು ಮೋಡಬಿತ್ತನೆಗೆ ಅವಕಾಶ ನೀಡುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.
ಇದನ್ನು ಪರಿಗಣಿಸಿದ ರಾಜ್ಯ ಸರ್ಕಾರ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಮೋಡ ಬಿತ್ತನೆಗೆ ಅವಕಾಶ ನೀಡಿದೆ.
ಮೋಡ ಬಿತ್ತನೆ ವೇಳೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನ ಪಡೆಯಬೇಕು ಹಾಗೂ ಬಿತ್ತನೆ ನಂತರದಲ್ಲಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಅಗತ್ಯ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ನಿರ್ಧೆಶನ ನೀಡಿದ್ದಾರೆ.