Breaking News

ಬೆಳಗಾವಿಯಲ್ಲಿ FM ರೇಡಿಯೋ ಶುರು ಮಾಡಿ…!!

ಬೆಳಗಾವಿ- ಕರ್ನಾಟಕ,ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಪ್ರಾರಂಭಿಸಲು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ದೆಹಲಿಯಲ್ಲಿ ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.

ಇಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಬೇಟಿ ಮಾಡಿ, ಬೆಳಗಾವಿಯಲ್ಲಿ FM ರೇಡಿಯೋ ಕೇಂದ್ರಕ್ಕೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಭೇಟಿಯಾಗಿ, ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಕೇಂದ್ರಗಳು ಮತ್ತು ಚಾನೆಲ್‌ಗಳ ಸ್ಥಾಪನೆಗೆ ಒತ್ತಾಯಿಸಿದರು.
ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನಿನೀಡಿದ್ದಾರೆ ಎಂದು ಈರಣ್ಣಾ ಕಡಾಡಿ ಒತ್ತಾಯಿಸಿದ್ದಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *