Breaking News
Home / Breaking News / ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು

ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು

ಬೆಳಗಾವಿ, -ಒಂದು ದೇಶ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿರುವ ಮಕ್ಕಳು ಆರೋಗ್ಯ, ಪ್ರಜ್ಞಾವಂತ, ದೈಹಿಕವಾಗಿ, ಶಾರೀರಿಕವಾಗಿ ಸದೃಢವಾಗಿರಬೇಕು. ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿದಾಗ ಮಾತ್ರ ಆರೋಗ್ಯವಂತ ಮಕ್ಕಳ ಜನನವಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಮಂಗಳವಾರ (ಸೆ.26) ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪೋಷಣ ಮಾಸಾಚರಣೆ ಹಾಗೂ ವಿವಿಧ ನೂತನ ಸಂಸ್ಥೆಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರಾಷ್ಟ್ರೀಯ ಪೋಷಣಾ ಅಭಿಯಾನ ಯೋಜನೆಯಡಿ ದೇಶೀಯ ಆಹಾರಗಳಾದ ರಾಗಿ, ಜೋಳ ಮತ್ತಿತರ ದವಸ ಧಾನ್ಯಗಳನ್ನು ಗರ್ಭಿಣಿ ಮಹಿಳೆಯರಿಗೆ ನೀಡಿ, ಎಲ್ಲ ಗರ್ಭಿಣಿ ಬಾಣಂತಿಯರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಇಲಾಖೆಯು ಕಾರ್ಯನಿರತವಾಗಿದೆ ಎಂದು ಹೇಳಿದರು.

ಸಮಾಜದಲ್ಲಿರುವ ಎಲ್ಲ ಮಹಿಳೆಯರು ಸಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಸರ್ಕಾರದ ಐದು ಜನಪರ ಯೋಜನೆಗಳು ಸಹಾಯಕವಾಗಿವೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆ, ವಿದೇಶಗಳಲ್ಲಿಯೂ ಸಹ ಪ್ರಶಂಸೆಯನ್ನೂ ಪಡೆಯುವಂತಹ ಯೋಜನೆಯಾಗಿದೆ ಎಂದು ಹೇಳಿದರು.

ಮಹಿಳೆಯರ ಮನಸ್ಸು ಕರುಣಾಮಯಿ, ಮಹಿಳೆಯರು ತಮ್ಮ ಮಕ್ಕಳಂತೆ ಸಮಾಜದಲ್ಲಿರುವ ಎಲ್ಲ ಮಕ್ಕಳನ್ನು ಪ್ರೀತಿಸುವಂಥಹ ಯಶೋಧೆಯರು ಅಂತಹವರ ಜೀವನ, ಆರೋಗ್ಯಕರ ಹಾಗೂ ಉತ್ತಮವಾಗಿರಬೇಕು ಎಂದು ಹೇಳಿದರು.

ಸರ್ಕಾರ ಜಾರಿಗೆ ತಂದಿರುವ ನಾಲ್ಕು ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಬಡವರಿಗೆ ಅನುಕೂಲವಾಗುತ್ತಿವೆ. ಮುಂದಿನ ದಿನಗಳಲ್ಲಿ ಐದನೇ ಯೋಜನೆಯಾದ ಯುವನಿಧಿ ಯೋಜನೆಯು ಸಹ ಚಾಲನೆ ನೀಡುತ್ತೇವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಎಂದು ಹೇಳಿದರು.

ಸಮಾಜದಲ್ಲಿರುವ ಗರ್ಭಿಣಿಯರು ಶೇ.45 ರಷ್ಟು ಮಹಿಳೆಯರು ಅಪೌಷ್ಟಿಕತೆಯಿಂದ ಮರಣ ಹೊಂದುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಇದನ್ನು ಹೋಗಲಾಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರಾದ ನಾಗರಾಜ್ ಆರ್. ಅವರು ಹೇಳಿದರು.

ಜಿಲ್ಲೆಯ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಮಾಜದಲ್ಲಿರುವ ಗರ್ಭಿಣಿ ಮಹಿಳೆಯರಿಗೆ ಉತ್ತಮ ಪೌಷ್ಟಿಕಾಂಶ ಆಹಾರ ದೊರಕುವ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಸರ್ಕಾರದ 5 ಜನಪರ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ವ್ಯಾಪಕ ಪ್ರಚಾರವಾಗಿದ್ದು, ಲಂಡನ್ ನ ಗಾರ್ಡಿಯನ್ ಪತ್ರಿಕೆಯಲ್ಲಿ ಕೂಡ ಈ ಯೋಜನೆ ಪ್ರಶಂಸೆಯನ್ನು ಪಡೆದಿದೆ ಎಂದು ಹೇಳಿದರು.

ವಿವಿಧ ಯೋಜನೆಗಳಿಗೆ ಚಾಲನೆ :

ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ, ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ, ಸರಕಾರಿ ವಿಶೇಷ ದತ್ತು ಕೇಂದ್ರ ಹಾಗೂ ಮಕ್ಕಳ ಸಹಾಯವಾಣಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ ಅವರು ಚಾಲನೆ ನೀಡಿದರು.
ವಿವಿಧ ಪೌಷ್ಟಿಕಾಂಶವುಳ್ಳ ದವಸ-ಧಾನ್ಯಗಳು ಹಾಗೂ ಸುಂದರವಾಗಿ ಬಿಡಿಸಿದ ರಂಗೋಲಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಿದರು. ವಿಕಲಚೇತನರಿಗೆ ಗಾಲಿಕುರ್ಚಿ ಮತ್ತಿತರ ಸಾಧನಗಳನ್ನು ವಿತರಿಸಲಾಯಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಹಾಂತೇಶ ಭಜಂತ್ರಿ ,
ಜಿಲ್ಲಾ ನಿರೂಪಣಾ ಅಧಿಕಾರಿಗಳಾದ ರೇವತಿ ಹೊಸಮಠ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
***

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *