ಬೆಳಗಾವಿ- ಲೋಕೋಪಯೋಗಿ ಇಲಾಖೆ ಸಚಿವ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ,ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವಂತೆ ಬೆಳಗಾವಿ ಜಿಲ್ಲೆಯಲ್ಲಿ ಅವರ ಅಭಿಮಾನಿಗಳು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು,ಅಭಿಮಾನಿಗಳು, ಹಾಗೂ ಹಲವಾರು ಜನ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಹಾಗು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಪತ್ರ ಬರೆದಿದ್ದಾರೆ. ಇನ್ನು ಹಲವಾರು ಜನ ಕಾಂಗ್ರೆಸ್ ಮುಖಂಡರುಗಳು ಪತ್ರಗಳನ್ನು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ ಅವರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಸತೀಶ್ ಜಾರಕಿಹೊಳಿ ಅವರು ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸಿದ್ದು ಅವರು ಕೆಪಿಸಿಸಿಯ ಕ್ರೀಯಾಶೀಲ ಕಾರ್ಯಾಧ್ಯಕ್ಷರಾಗಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರು ಪ್ರಮುಖ ಪಾತ್ರವಹಿಸಿ ಪಕ್ಷದ ಸೇವೆ ಮಾಡಿದ್ದು ಅವರಿಗೆ ಡಿಸಿಎಂ ಹುದ್ದೆ ನೀಡಬೇಕೆನ್ನುವದು ಅವರ ಫಾಲೋವರ್ಸ್ ಗಳ ಒತ್ತಾಯವಾಗಿದೆ.
ಡಿಸಿಎಂ ಹುದ್ದೆ ನೀಡಲು ಪತ್ರ ಬರೆಯಲು ಸತೀಶ್ ಜಾರಕಿಹೊಳಿ ಅವರು ಒಪ್ಪುವದಿಲ್ಲ ಅದಕ್ಕೆ ಅವರು ಅವಕಾಶ ನೀಡುವದಿಲ್ಲ ಎನ್ನುವದು ಅವರ ಅಭಿಮಾನಿಗಳಿಗೆ ಗೊತ್ತಿದೆ,ಹೀಗಾಗಿ ಅವರು ಸತೀಶ್ ಜಾರಕಿಹೊಳಿ ಅವರಿಗೆ ಗೊತ್ತಾಗದಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಗುಪ್ತವಾಗಿ ಪತ್ರ ಬರೆಯುವ ಅಭಿಮಾನ ಆರಂಭಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ