ದಿನೇಶ್ ಗುಂಡೂರಾವ್..
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಬುಧವಾರ ಬೆಳಗಾವಿಗೆ ಆಗಮಿಸಿದ್ದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ
ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದಾ ಸಂತೋಷ ಎಸ್. ಲಾಡ್ ಅವರು ಬುಧವಾರ (ಅ.4) ಬೆಳಗ್ಗೆ 9:30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬಳಿಕ ಬೆಳಿಗ್ಗೆ 11 ಗಂಟೆಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅದೇ ರೀತಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯ ಕಂಗ್ರಾಳಿಯಲ್ಲಿರುವ ಕಟ್ಟಡ ನಿರ್ಮಾಣ ಸ್ಥಳಕ್ಕೆ ಟ್ರಾನ್ಸಿಟ್ ಅಕಾಮಡೇಶನ್ ಹಾಗೂ ಅಶೋಕ ನಗರದಲ್ಲಿರುವ ಕರ್ನಾಟಕ ರಾಜ್ಯ ವಿಮಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳೊಂದಿಗೆ ಹಾಗೂ ಉದ್ದಿಮೆಮಿದಾರರೊಂದಿಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಮಾಲೋಚನಾ ಸಭೆಯನ್ನು ನಡೆಸಲಿದ್ದಾರೆ ಎಂದು ಬೆಳಗಾವಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಭೇಟಿ..
ಸಚಿವರಾದ ಸಂತೋಷ ಲಾಡ್ ಮತ್ತು ದಿನೇಶ್ ಗುಂಡೂರಾವ್ ಅವರು ಇಂದು ಬೆಳಗಾವಿಗೆ ಆಗಮಿಸಿದ್ದು 10-30 ಕ್ಕೆ ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					