ಬೆಳಗಾವಿ- ಬೆಳಗಾವಿಯ ಐತಿಹಾಸಿಕ ಹಿಂಡಲಗಾ ಜೈಲಿಗೆ ಅನಾಮಧೇಯ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ, ಬೆಂಗಳೂರಿನ ಕಾರಾಗೃಹ ಹಿಂಡಲಗಾ ಕಾರಾಗೃಹ ಸ್ಪೋಟಿಸುವ ಬೆದರಿಕೆ ಹಾಕಿದ ಘಟನೆ ನಡೆದಿದೆ.ಬಂದೀಖಾನೆ ಉತ್ತರ ವಲಯದ ಡಿಐಜಿಪಿ ಟಿ ಪಿ ಶೇಷ ಅವರಿಗೆ ಈ ಫೋನ್ ಕರೆ ಬಂದಿದ್ದು ಅವರು ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.
ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ ಸ್ಪೋಟಿಸುವ ಬೆದರಿಕೆ ಬಂದಿದೆ.ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ ಶೇಷ ಅವರಿಗೆ ಬೆದರಿಕೆ ಕರೆ ಬಂದಿದ್ದು,ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ ಸ್ಪೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ.
ಹಿಂಡಲಗಾ ಜೈಲಿನ ಸಿಬ್ಬಂದಿಯ ಪರಿಚಯಸ್ಥನೆಂದು ಹೇಳಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.ತಾನು ಹಿಂಡಲಗಾ ಜೈಲಿನ ಹೆಡ್ ವಾಡರ್‌ಗಳಾದ ಜಗದೀಶ್ ಗಸ್ತಿ, ಎಸ್.ಎಂ ಗೋಟೆ ಪರಿಚಯಸ್ಥನೆಂದು ಹೇಳಿರುವ ಅನಾಮಧೇಯ. ವ್ಯಕ್ತಿ,ಟಿ.ಪಿ ಶೇಷ ಅವರ ಸರ್ಕಾರಿ ನಂಬರ್‌ಗೆ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ.
.ಫೋನ್ ಕರೆಯಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ ಹೆಸರೂ ಉಲ್ಲೇಖ ಮಾಡಿದ್ದಾನೆ.ತಾನು ಜೈಲಿನಲ್ಲಿದ್ದಾಗ
ಬನ್ನಂಜೆ ರಾಜಾಗೆ ಸಹಾಯ ಮಾಡಿದ್ದೇನೆ ಎಂದು ಹೇಳಿದ್ದಾನೆ.ಅನಾಮಧೇಯ ವ್ಯಕ್ತಿಯಿಂದ ಕಾರಾಗೃಹ ಆಡಳಿತಕ್ಕೆ ಧಕ್ಕೆ ಅಗುವ ಸಾಧ್ಯತೆ ಹಿನ್ನೆಲೆಯಲ್ಲಿ.ಅನಾಮಧೇಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಐಜಿಪಿ ಟಿ ಪಿ ಶೇಷ ಅವರು ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.