ಬೆಳಗಾವಿ- ಬೆಳಗಾವಿಯಲ್ಲಿ ಈ ಬಾರಿಯ ರಾಜ್ಯೋತ್ಸವವನ್ನು ಅಭೂತಪೂರ್ವ ಗೊಳಿಸುವ ನಿಟ್ಟಿನಲ್ಲಿ ನಾಳೆ ಗುರುವಾರ ಬೆಳಗಾವಿ ಜಿಲ್ಲಾಡಳಿತ ಪೂರ್ವಭಾವಿ ಸಭೆ ನಡೆಸಲಿದೆ.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಾಳೆ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಜ್ಯೋತ್ಸವದ ಸಭೆ ನಡೆಸಲಿದ್ದು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಾಳೆ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಎಲ್ಲ ಕನ್ನಡಪರ ಹೋರಾಟಗಾರರು, ಮತ್ತು ಕನ್ನಡದ ಅಭಿಮಾನಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					