Breaking News

ರೋಹೀತ್..ರೋಹೀತ್….ಸೂಪರ್ ಹಿಟ್…!!

ನವದೆಹಲಿ: ಬುಧವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿಅಫಘಾನಿಸ್ತಾನದ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್‌ ಮಾಡಿದ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ, 84 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ ಹಾಗೂ 16 ಬೌಂಡರಿಗಳೊಂದಿಗೆ 131 ರನ್‌ ಗಳಿಸಿದರು. ಆ ಮೂಲಕ ವಿಶ್ವಕಪ್ ಇತಿಹಾಸದಲ್ಲಿ7ನೇ ಶತಕವನ್ನು ಪೂರ್ಣಗೊಳಿಸಿದರು.

ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ ರೋಹಿತ್ ಶರ್ಮಾ ವಿಶ್ವಕಪ್ ಪಂದ್ಯದಲ್ಲಿ ಏಳು ಶತಕ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

1992, 1996, 1999, 2003, 2007 ಮತ್ತು 2011 ರ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರು ಆರು ಶತಕಗಳನ್ನು ಸಿಡಿಸಿದ್ದರು. ಆದರೆ ರೋಹಿತ್ ಶರ್ಮಾ ಕೇವಲ ಮೂರರಲ್ಲಿ 2015, 2019 ಮತ್ತು 2023 ವಿಶ್ವಕಪ್ ನಲ್ಲಿ ಈ ಸಾಧನೆ ಮಾಡಿದ್ದು, ಸಚಿನ್ ತೆಂಡೂಲ್ಕರ್‌ ಈದ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

ವಿಶ್ವಕಪ್‌ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳು
ರೋಹಿತ್‌ ಶರ್ಮಾ: 19 ಪಂದ್ಯಗಳಿಂದ 7 ಶತಕಗಳು
ಸಚಿನ್‌ ತೆಂಡೂಲ್ಕರ್‌: 45 ಪಂದ್ಯಗಳಿಂದ 6 ಶತಕಗಳು
ಸೌರವ್‌ ಗಂಗೂಲಿ: 21 ಪಂದ್ಯಗಳಿಂದ 4 ಶತಕಗಳು
ಶಿಖರ್‌ ಧವನ್‌: 10 ಪಂದ್ಯಗಳಿಂದ 3 ಶತಕಗಳು

ಭರ್ಜರಿ ಗೆಲುವು...

ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟೀಂಗ್ ಮಾಡಿದ ರೋಹಿತ ಶರ್ಮಾ ಭಾರತಕ್ಕೆ ಗೆಲುವು ತಂದುಕೊಟ್ಟರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *