Breaking News
Home / Breaking News / ಮನೆ ಮುಂದೆ ಕನ್ನಡಜ್ಯೋತಿ ಬೆಳಗಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ

ಮನೆ ಮುಂದೆ ಕನ್ನಡಜ್ಯೋತಿ ಬೆಳಗಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ

ಬೆಳಗಾವಿ, : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ಸಂಭ್ರಮವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿಕೊಂಡಿದ್ದಾರೆ.

ನವೆಂಬರ್ 1 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ “ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯವನ್ನು ಬರೆಯುವಂತೆ ಅವರು ವಿನಂತಿಸಿದ್ದಾರೆ.

ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ‌ ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೆ ಗೌರವ ಸಲ್ಲಿಸಬೇಕು.

ನವೆಂಬರ್ 1 ರಂದು ಸಂಜೆ‌ 5 ಗಂಟೆಗೆ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಧದ ಗಾಳಿಪಟಗಳನ್ನು ಹಾರಿಸುವ ಮೂಲಕ ಸುವರ್ಣ ಸಂಭ್ರಮ‌ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ ನವೆಂಬರ್ 1 ರಂದು ಸಂಜೆ 7 ಗಂಟೆಗೆ ಪ್ರತಿಯೊಬ್ಬರು ತಮ್ಮ ಮನೆಗಳು, ಕಚೇರಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಾಗರಿಕರಲ್ಲಿ ಮನವಿ ಮಾನವಿಕೊಂಡಿದ್ದಾರೆ.

ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
***

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *