Breaking News

ಸಿಎಂ ಮಾದ್ಯಮ ಸಲಹೆಗಾರ ಪ್ರಭಾಕರ ಬೆಳಗಾವಿಗೆ ಬರ್ತಾರೆ…!!

ಬೆಳಗಾವಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನ. 11 ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದಿಲೀಪ ಕುರಂದವಾಡೆ ತಿಳಿಸಿದರು.

ನಗರದಲ್ಲಿ ಶುಕ್ರವಾರ ಕೆಯುಡಬ್ಲ್ಯುಜೆ ಜಿಲ್ಲಾ ಘಟಕದ ಕಾರ್ಯಕಾರಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಮಹನೀಯರನ್ನು ಕೂಡ ಸನ್ಮಾನಿಸಲಾಗುವುದು ಎಂದು ಹೇಳಿದರು.
ಇಡೀ ರಾಜ್ಯದಲ್ಲೇ ಸಂಘದ ಬೆಳಗಾವಿ ಜಿಲ್ಲಾ ಘಟಕವನ್ನು ಮಾದರಿಯಾಗಿ ರೂಪಿಸಲು ಹಲವು ಯೋಜನೆ ರೂಪಿಸಲಾಗಿದೆ. ಪತ್ರಕರ್ತರಿಗೆ ರಿಯಾಯತಿ ದರದಲ್ಲಿ ನಿವೇಶನ ನೀಡುವುದು, ಪತ್ರಕರ್ತರ ಮಕ್ಕಳಿಗೆ ಐಎಎಸ್‌, ಐಪಿಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಗೊಳಿಸುವುದು ಸೇರಿದಂತೆ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಅನಿವಾರ್ಯ ಕಾರಣಗಳಿಂದ ಸ್ಥಗಿತಗೊಂಡಿದ್ದ ಭಾನುವಾರದ ಬಾಂಧವ್ಯ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಲಾಗುವುದು ಎಂದು ಹೇಳಿದರು.

ಸಂಘದ ಗೌರವಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಸಂಘವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ನ. 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಂಘದ ಜಿಲ್ಲೆಯ ಎಲ್ಲ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಸಂಘದ ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ ಪಾಟೀಲ, ಯಲ್ಲಪ್ಪ ತಳವಾರ, ಶ್ರೀಶೈಲ ಮಠದ, ಪ್ರಧಾನ ಕಾರ್ಯದರ್ಶಿ ಅರುಣ ಪಾಟೀಲ, ನೌಶಾದ ಬಿಜಾಪುರ, ಶ್ರೀಕಾಂತ ಕುಬಕಡ್ಡಿ, ಮಂಜುನಾಥ ಪಾಟೀಲ, ಲೀನಾ ಟೋಪಣ್ಣವರ ಮೊದಲಾದವರು ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *