ಬೆಳಗಾವಿ: ಸಿಎಂ ನೇತೃತ್ವದ ಸಚಿವರ ಬ್ರೇಕ್‌ಫಾಸ್ಟ್ ಸಭೆಗೆ ನನಗೆ ಆಹ್ವಾನವೇ ಬಂದಿಲ್ಲ ಎಂದು ಬೆಳಗಾವಿಯಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಸ್ಪಷ್ಟನೆ ನೀಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಗೆ ನನಗೆ ಆಹ್ವಾನ ಇರಲಿಲ್ಲ, ಹುಷಾರೂ ಇರಲಿಲ್ಲ.ಹೀಗಾಗಿ ಸಿಎಂ ಕರೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ನಾನು ಭಾಗಿಯಾಗಿಲ್ಲ ಎಂದು ಸಿಎಂ ಬ್ರೇಕ್‌ಫಾಸ್ಟ್ ಸಭೆಗೆ ಗೈರಾಗಿದಕ್ಕೆ ಡಾ. ಶರಣಪ್ರಕಾಶ ಪಾಟೀಲ ಸ್ಪಷ್ಟನೆ ಕೊಟ್ಟರು.
ಅವಕಾಶ ಕೊಟ್ಟರೆ ನಾನೂ ಸಿಎಂ ಆಗ್ತಿನಿ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ನೀವೆ ಅಪಾರ್ಥ ಮಾಡಿಕೊಂಡಿದ್ದೀರಿ.ಅವರಾಗಿಯೇ ಮಾಧ್ಯಮಗಳ ಎದುರು ಬಂದು ಸಿಎಂ ಆಗ್ತೇನಿ ಅಂದಿಲ್ಲ.ಮಾಧ್ಯಮಗಳು ಪದೆ ಪದೇ ಪ್ರಶ್ನಿಸಿದಾಗ ಅವಕಾಶ ಸಿಕ್ಕರೆ ನಾನು ಸಿಎಂ ಆಗ್ತಿನಿ ಅಂದಿದ್ದಾರೆ.ನಮ್ಮ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ, ಒಕ್ಕಟ್ಟಾಗಿದ್ದೇವೆ.ಯಾವುದೇ ಶಾಸಕರಲ್ಲಿ ಅಸಮಾಧಾನ, ಭಿನ್ನಮತ ಇಲ್ಲ.ಈ ರಾಜ್ಯದ ಅಭಿವೃದ್ಧಿಯೇ ನಮ್ಮ ಪಕ್ಷದ ಧ್ಯೇಯ, ಧೋರಣೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ಈ ಪ್ರಶ್ನೆಯನ್ನು ನೀವು ನನ್ನನ್ನ ಕೇಳಲೇಬಾರದು.ಸಾರ್ವಜನಿಕ ಹಿತಾಸಕ್ತಿ ಪ್ರಶ್ನೆಗಳಿಗೆ ಮಾತ್ರ ನಾನು ಉತ್ತರಿಸುತ್ತೇನೆ.ಇಂಥ ಪ್ರಶ್ನೆಗಳಿಗೆ ಉತ್ತರಿಸುವ ವ್ಯಕ್ತಿತ್ವ ನನ್ನದಲ್ಲ ಎಂದು ಬೆಳಗಾವಿಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.