ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಇತ್ತೀಚಿಗೆ ಅಂಗಡಿಗಳ ಕೀಲಿ ಮುರಿದು ಕಳ್ಳತನ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿರುವ ಬೆನ್ನಲ್ಲಿಯೇ ಗ್ರಾಹಕರ ಸೋಗಿನಲ್ಲಿ ಬಂದ ಚಾಲಾಕಿಗಳು ಲಕ್ಷ ಲಕ್ಷ ಬೆಲೆಬಾಳುವ ಸೀರೆಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕಳ್ಳತನ ಮಾಡಲಾಗಿದೆ.ಬೆಳಗಾವಿ ಖಡೇ ಬಜಾರ್ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಕಳ್ಳತನ ನಡೆದಿದೆ.2ಲಕ್ಷ ಮೌಲದ್ಯ 8 ಕಾಂಚಿಪುರಂ ಸೀರೆ, 1 ಇಳಕಲ್, ರೇಷ್ಮೆ ಸೀರೆಗಳ ಕಳ್ಳತನ ಮಾಡಲಾಗಿದೆ.6 ಜನ ಮಹಿಳೆಯರು ಹಾಗೂ ಓರ್ವ ಪುರುಷ ಇರೋ ಖತರನಾಕ್ ಗ್ಯಾಂಗ್ ಕಳ್ಳತನ ಮಾಡಿರುವ ವಿಚಾರ ಸಿಸಿ ಟಿವ್ಹಿಯಲ್ಲಿ ರಿಕಾರ್ಡ್ ಆಗಿದೆ.
ಸೀರೆ ಕಳ್ಳತನ ಮಾಡೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಒಬ್ಬರಿಗೆ ಒಬ್ಬರು ಪರಿಚಯ ಇಲ್ಲೇ ರೀತಿಯಲ್ಲಿ ಅಂಗಡಿಗೆ ಎಂಟ್ರಿ ಮಾಡಿ,ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ತೆಲಗು, ತಮಿಳಿನಲ್ಲಿ ಮಾತನಾಡುತ್ತಿದ್ದ ಮಹಿಳೆಯರು ಎಂಬ ಮಾಹಿತಿ ಇದೆ.ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ