Breaking News
Home / Breaking News / ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ರನ್ ವೇ….!!

ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ರನ್ ವೇ….!!

ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, -ಬೆಳಗಾವಿಯ ಸಾಂಬ್ರಾ ವಿಮಾನ‌ನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.8) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರನ್ ವೇ ಮತ್ತು ಟರ್ಮಿನಲ್ ಜಮೀನು ಅಗತ್ಯತೆ ಹಾಗೂ ಅದರ ಸಮರ್ಪಕ ಬಳಕೆಯ ಕುರಿತು ನೀಲನಕ್ಷೆಯ ಸಮೇತ ಸಮಗ್ರ ವರದಿಯನ್ನು ಸಲ್ಲಿಸಬೇಕು. ಇದನ್ನು ಆಧರಿಸಿ ಅಗತ್ಯತೆ ಅನುಸಾರ ಜಮೀನು ಒದಗಿಸಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಜನರಿಗೆ ಪರ್ಯಾಯ ರಸ್ತೆ ಮತ್ತಿತರ ಸೌಕರ್ಯಗಳನ್ನು ಒದಗಿಸುವ ಬಗ್ಗೆ ವಿಮಾನ ನಿಲ್ದಾಣದ ನಿರ್ದೇಶಕರು ಸ್ಪಷ್ಟ ಹಾಗೂ ಲಿಖಿತ ಮಾಹಿತಿಯನ್ನು ಒದಗಿಸಬೇಕು ಎಂದರು.

ಈಗಾಗಲೇ ಸಾಕಷ್ಟು ಜಮೀನು ಒದಗಿಸಲಾಗಿದೆ. ಅದ್ದರಿಂದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆ, ಸಿಗ್ನಲ್‌ ದೀಪಗಳ ಅಳವಡಿಕೆಗೆ ಅತ್ಯಗತ್ಯವಾಗಿರುವ ಜಮೀನು ಮಾತ್ರ ಒದಗಿಸಲಾಗುವುದು.ಸಾಧ್ಯವಾದಷ್ಟು ಕಾಮಗಾರಿಗಳನ್ನು ಈಗಾಗಲೇ ಒದಗಿಸಲಾಗಿರುವ ಜಮೀನಿನಲ್ಲಿ ಕೈಗೊಳ್ಳಬೇಕು.

ಟರ್ಮಿನಲ್ ವಿಸ್ತರಣೆಗೆ ಎಷ್ಟೇ ಜಮೀನು ಅಗತ್ಯವಿದ್ದರೂ ಅದನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆಯನ್ನು ನೀಡಿದರು.

ಈಗಾಗಲೇ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನಿನಲ್ಲಿ 14.05 ಎಕರೆ ಜಮೀನು ಏರ್ ಫೋರ್ಸ್ ಸ್ವಾಧೀನದಲ್ಲಿರುವುದರಿಂದ ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ‌ ನಿರ್ದೇಶಕರಾದ ತ್ಯಾಗರಾಜನ್ ಅವರು, ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಜಮೀನು ಒದಗಿಸುವುದರ ಜತೆಗೆ ಇನ್ನಿತರ ಸೌಕರ್ಯಗಳನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಸ್ಥಳೀಯರಿಗೆ ಪರ್ಯಾಯ ರಸ್ತೆ‌ ನಿರ್ಮಾಣ ಮತ್ತಿತರ‌ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ್ ದುಡಗುಂಟಿ, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
****

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *