ಬೆಂಗಳೂರು- ಬಿಜೆಪಿ ದಿಟ್ಟ ನಿರ್ಧಾರ ಕೈಗೊಂಡಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಜನ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಿದ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ