Breaking News

ಬೆಳಗಾವಿ ಮಂದಿಗೆ ದೀಪಾವಳಿ ಹಬ್ಬದ ಖುಷಾಲಿ. ಗುಡ್ ನ್ಯುಸ್……!!!

ಬೆಳಗಾವಿ: ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಹಾಗೂ  ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅತ್ಯಂತ ಕ್ರೀಯಾಶೀಲರಾಗಿದ್ದು ದೀಪಾವಳಿ ಹಬ್ಬದ ದಿನ ಬೆಳಗಾವಿ ಮಂದಿಗೆ ವಿಶೇಷ ಗೀಫ್ಟ್ ಕೊಟ್ಟಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 02.00 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ ಎಂದು ಕಡಾಡಿ ತಿಳಿಸಿದ್ದಾರೆ.

ಶ್ರೀಘ್ರದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ತಮ್ಮ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಧನ್ಯವಾದ ಹೇಳಿದ್ದಾರೆ.

ವಂದೇ ಭಾರತ್ ರೈಲು ಬೆಳಗಾವಿಗೂ ಮಂಜೂರು ಮಾಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಕೇಂದ್ರದ ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದರು.

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *