ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ,ಕಿತ್ತೂರು ಪಟ್ಟಣದ ಸಮೀಪದಲ್ಲೇ ಇರುವ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ.ಇಂದು ಸಂಜೆ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಸೊಂಕು ಇರುವದು ದೃಡವಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವದು ದೃಡವಾಗಿರುವದರಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಈ ಬಾಲಕ ಚೆನೈ ನಿಂದ ಗ್ರಾಮಕ್ಕೆ ಮರಳಿದ್ದ SSLC ಪರೀಕ್ಷೆ ಬರೆಯಲು ತನ್ನ ಗ್ರಾಮಕ್ಕೆ ಮರಳಿದ್ದ ಎಂದು ತಿಳಿದು ಬಂದಿದೆ.
ಲಾಕ್ ಡೌನ್ ಗೂ ಮುನ್ನ ಚೆನೈ ನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ಹದಿನಾರು ವರ್ಷದ ಬಾಲಕ,
ಗ್ರಾಮಕ್ಕೆ ಬಂದ ಬಳಿಕ ಇಡೀ ಗ್ರಾಮದಲ್ಲಿ ಸುತ್ತಾಡಿದ್ದ ಎಂದು ಹೇಳಲಾಗಿದ್ದು,
ನಿನ್ನೆಯಷ್ಟೇ ಸಲೂನ್ ಗೆ ತೆರಳಿ ಕಟಿಂಗ್ ಮಾಡಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 309 ಕ್ಕೇರಿದಂತಾಗಿದೆ.