ಬೆಳಗಾವಿ-ಬೆಳಗಾವಿಯ ಹಲಗಾ ಬಳಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಜಮೀನು ನೀಡಿರುವ ರೈತರಿಗೆ ಪರಿಹಾರ ಸಿಕ್ಕಿಲ್ಲ.ಹೆಚ್ಚಿನ ಪರಿಹಾರಕ್ಕೆ ಕಳೆದ ಆರು ವರ್ಷಗಳಿಂದ ರೈತರು ಅಲೆದಾಡುತ್ತಿದ್ದು ಅವರಿಗೆ ಪರಿಹಾರ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.
ಹಲಗಾ ಗ್ರಾಮದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ(STP ಪ್ಲಾಂಟ್) ನಿರ್ಮಾಣಕ್ಕೆ 2019ರಲ್ಲಿ ಕಾಮಗಾರಿ ಆರಂಭಿಸಲಾಗಿದೆ.ಬೆಳಗಾವಿ ನಗರದ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗೆ2019ರಲ್ಲಿ ಭೂ ಸ್ವಾಧೀನ ಆಗಿತ್ತು,ಎಕರೆ ಜಮೀನಿಗೆ 3.50ಲಕ್ಷ ಪರಿಹಾರ ಘೋಷಣೆ ಮಾಡಲಾಗಿತ್ತು,ಆದ್ರೆ ಇದಕ್ಕೆ ಒಪ್ಪದ ರೈತರು ಹೆಚ್ಚಿನ ಪರಿಹಾರ ಕೊಡಬೇಕು ಎಂದು ಹೋರಾಟ ಮಾಡುತ್ತಲೇ ಇದ್ದಾರೆ.ಕಡಿಮೆ ಪರಿಹಾರ ಹಿನ್ನೆಲೆ ಹಲಗಾ ಗ್ರಾಮದ ರೈತರ ಆಕ್ರೋಶ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಅಧಿಕಾರಿಗಳ ಸಭೆ ನಡೆಸಿದ್ರು.
ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ರೈತರೊಂದಿಗೆ ಸಭೆ ನಡೆಯಿತು. ಹೆಚ್ಚಿನ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಆದಷ್ಟು ಬೇಗ ಕಳುಹಿಸುವಂತೆ ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ರು.