Breaking News

ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ….!!!

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಂದು ಬಿಜೆಪಿಯ ಪ್ರಭಾವಿ ನಾಯಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸುವದರ ಮೂಲಕ ಎಲ್ಲರ ಗಮನ ಸೆಳೆದರು.

ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಸರ್ಕಾರವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಅವರು ಸದಾಶಿವ ನಗರದಲ್ಲಿ ಇರುವ ರಮೇಶ್ ಅವರ ಮನೆಯಲ್ಲಿ ಭೇಟಿಯಾದರು.

ಹಲವಾರು ರಾಜಕೀಯ ಬೆಳವಣಿಗಳ ಕುರಿತು,ಹಲವಾರು ರಾಜಕೀಯ ನಿರ್ಧಾರಗಳ ಕುರಿತು ವಿಜಯೇಂದ್ರ ಮತ್ತು ರಮೇಶ್ ಜಾರಕಿಹೊಳಿ ಅವರ ನಡುವೆ ಭಿನ್ನಾಭಿಪ್ರಾಯಗಳಿದ್ದವು.ಆದ್ರೆ ವಿಜಯೇಂದ್ರ ಅವರು ಇವತ್ತು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ಮಾಡುವದರ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇಬ್ಬರು ಪ್ರಭಾವಿ ನಾಯಕರ ಭೇಟಿ ಬಿಜೆಪಿ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಇವರ ಭೇಟಿ ಬೆಳಗಾವಿ ಜಿಲ್ಲೆಯ ರಾಜಕೀಯ ದಿಕ್ಸೂಚಿಯನ್ನು ಬದಲಾಯಿಸುದರಲ್ಲಿ ಎರಡು ಮಾತಿಲ್ಲ.ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಅವರನ್ನು ಸತ್ಕರಿಸಿ ಗೌರವಿಸಿದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *