ಬೆಳಗಾವಿ: 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ
ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ ಅಜ್ಜಿ ದೂರು ನೀಡಿದ್ದರು.
ಲೋಕಾಯುಕ್ತ ಎಸ್ಪಿ ಹಣಮತರಾಯ, ಡಿವೈಎಸ್‌ಪಿ
ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್‌ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡದಿಂದ ಎಸ್‌ಡಿಸಿ ಟ್ರ್ಯಾಪ್ ಮಾಡಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ