Breaking News
Home / Breaking News / ಅಪಘಾತ :ಬೆಳಗಾವಿಯಲ್ಲಿ ಇಬ್ಬರ ಸಜೀವ ದಹನ..

ಅಪಘಾತ :ಬೆಳಗಾವಿಯಲ್ಲಿ ಇಬ್ಬರ ಸಜೀವ ದಹನ..

ಬೆಳಗಾವಿ-ಟಿಪ್ಪರ್ ಮತ್ತು ಕಾರಿನ ಮಧ್ಯೆ ಬೀಕರ ರಸ್ತೆ ಅಪಘಾತ ಇಬ್ಬರ ಸಜೀವ ದಹನವಾದ ಘಟನೆಬೆ ಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ.

ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದ ಕುಟುಂಬ,ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟ್ಟಿದ್ದ ನಾಲ್ವರು,ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿ.ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಹೊತ್ತಿ ಉರಿದ ಕಾರು, ಟಿಪ್ಪರ್.ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ.

ಈ ದುರ್ಘಟನೆಯಲ್ಲಿ ಇಬ್ಬರು ಬಲಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳಾಗಿದ್ದಾರೆ.

ಸ್ಥಳೀಯರಿಂದ ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ಪಡೆಯುತ್ತಿದ್ದಾರೆ.
ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ.
ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರ ಶವವನ್ನ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.ಅಪಘಾತ ಆಗ್ತಿದ್ದಂತೆ ಪೊಲೀಸ್ ಠಾಣೆಗೆ ತೆರಳಿ ಶರಣಾದ ಟಿಪ್ಪರ್ ಡ್ರೈವರ್.ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲ…!

ಚಿಕ್ಕೋಡಿ- ಚಿಕ್ಕೋಡಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಆಗಿದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ NCP ಅಭ್ಯರ್ಥಿ ಉತ್ತಮ್ …

Leave a Reply

Your email address will not be published. Required fields are marked *