Breaking News
Home / Breaking News / ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಕ್ಕೆ ಸೂಚನೆ

ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಕ್ಕೆ ಸೂಚನೆ

ಸುವರ್ಣ ವಿಧಾನಸೌಧ ನ.12: ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೇ ನೀಡಿದ್ದು, ಈ ಸಂಬAಧ ಕಾರ್ಖಾನೆಗಳ ಮಾಲಿಕರಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಕೊಠಡಿ ಸಂಖ್ಯೆ 354ರಲ್ಲಿ ಮಂಗಳವಾರ ಸಚಿವ ಶಿವಾನಂದ ಪಾಟೀಲ, ಶಾಸಕ ಲಕ್ಷö್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ಕಾನೂನು ಮಾಪನಶಾಸ್ತç ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿವೆ. ಇದರಲ್ಲಿ 24 ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿದ್ದು, ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್‌ಗೆ ಪರಿವರ್ತನೆ ಆಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಕಾನೂನು ಮಾಪನಶಾಸ್ತç ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ರೈತರು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಮೋಸ ಆಗಬಾರದು. ರೈತರ ಗದ್ದೆಗಳಿಂದ ಲಾರಿಯಲ್ಲಿ ಎಷ್ಟು ಕಬ್ಬು ಬಂದಿರುತ್ತದೆಯೋ ಅಷ್ಟೇ ತೂಕ ಕಾರ್ಖಾನೆಗಳಲ್ಲಿ ತೂಕ ಮಾಡಿದಾಗಲೂ ಬರಬೇಕು. ಸರಿಯಾಗಿ ತೂಕ ಮಾಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಎಚ್ಚರಿಸಿದರು.

ಡಿಜಿಟಲ್ ತೂಕ ಯಂತ್ರಗಳ ಅಳವಡಿಕೆಗೆ ಸಂಬAಧಿಸಿದAತೆ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಮಾಪನಶಾಸ್ತç ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ನಿಯಂತ್ರಕರು ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದೂ ಹೇಳಿದರು.

ಪ್ರಸ್ತುತ 5 ಕೆಜಿ ಅಕ್ಕಿ ಬದಲಿಗೆ ಗ್ರಾಹಕರಿಗೆ ನಗದು ನೀಡಲಾಗುತ್ತಿದೆ. ಹಲವು ಪ್ರಯತ್ನಗಳ ನಂತರವೂ ಅಕ್ಕಿ ದೊರೆಯದ ಕಾರಣ ಹಣ ನೀಡಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದೊAದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ, ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗ ಪ್ರತಿಕ್ರಿಯಿಸಿದರು.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *