Breaking News

ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ

ಹೊಸ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಹೊಸ ವಂಟಮೂರಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಅಮಾನವೀಯವಾಗಿ ಹಲ್ಲೆಗೊಳಗಾದ ನೊಂದ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧೈರ್ಯ ತುಂಬಿದರು.

ಈ ವೇಳೆ ಮಾತನಾಡಿ, ಹೊಸ ವಂಟಮೂರಿ ಗ್ರಾಮದಲ್ಲಿ
ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂತ್ರಸ್ತ ಮಹಿಳೆಯ ನೆರವಿಗಾಗಿ ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇದಲ್ಲದೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು,ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಹೊಸ ವಂಟಮೂರಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Check Also

ಲವ್ ಮ್ಯಾರೇಜ್ ಮಾಡುವಂತೆ ಹಠ ಹಿಡಿದಿದ್ದ ಮಗನ ಮರ್ಡರ್…..!!!

    ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಯಾಕೋ ಏನೋ ಗೊತ್ತಿಲ್ಲ ಲವ್ ಡವ್ ಗಳು ಸಕ್ಸೆಸ್ ಆಗುತ್ತಿಲ್ಲ ಪ್ರೇಮಿಗಳ ಮೇಲೆ …

Leave a Reply

Your email address will not be published. Required fields are marked *