ಬೆಳಗಾವಿಯಲ್ಲೂ ಪ್ಲಾಸ್ಟಿಕ್ ರಸ್ತೆ ನಿರ್ಮಾಣಕ್ಕೆ ನಿರ್ಧಾರ..!!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿ ಬೆಳಗಾವಿ ನಗರದಲ್ಲೂಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,.ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಸಂಶೋಧನೆ ಮತ್ತು ನಿಯತಕಾಲಿಕೆ ಪ್ರಕಾರ ಶೇ 6 ರಿಂದ 8 ರಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಬಳಸಿ ರಸ್ತೆ ನಿರ್ಮಿಸುವ ರಸ್ತೆಯನ್ನು ಡಾಂಬರೀಕರಣ ಮಾಡುವ ಯೋಜನೆ ಇದಾಗಿದೆ. ರಸ್ತೆಗ ನಿರ್ಮಾಣ ವೆಚ್ಚ,ತಗ್ಗಲಿದ್ದು ಬಾಳಿಕೆ ಹಾಗೂ ಗುಣಮಟ್ಟದಲ್ಲಿ ಉತ್ತಮವಾಗಿರುತ್ತದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.

ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ನಂತರ ಅದರ ಗುಣಮಟ್ಟ ಹಾಗೂ ಬಾಳಿಕೆಯನ್ನು ಆಧರಿಸಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇತರ ರಸ್ತೆಗಳನ್ನು ನಿರ್ಮಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅಧ್ಯಕ್ಷೆ ವಾಣಿ ಜೋಶಿ ತಿಳಿಸಿದರು.

ಸಭೆಯಲ್ಲಿ ಮೇಯರ್ ಶೋಭಾ ಸೋಮನ್ನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಪಾಲಿಕೆ ಪರಿಷತ್ ಕಾರ್ಯದಶರ್ಿ ಉದಯಕುಮಾರ ತಳವಾರ್, ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಮುಂತಾದವರು ಉಪಸ್ಥಿತರಿದ್ದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *