ಬೆಳಗಾವಿ-ಬೆಳಗಾವಿ ಡಿಸಿ ಆಫೀಸ್ ನಲ್ಲಿ ಫಿನಾಯಿಲ್ ಕುಡಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕೊಪ್ಪದ (23) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಚಿಂತಾಜನಕವಾಗಿದೆ.ಮಾಹಿತಿ ತಿಳಿದು ಕೂಡಲೇ ಬೆಳಗಾವಿ ಮಾರ್ಕೆಟ್ ಪೊಲೀಸರು ಯುವಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ