ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಿರೋದು ತುಂಬಾ ಖುಷಿಯಾಗಿದೆ ಎಂದು ಹೇಳಿದ ಶ್ರದ್ಧಾ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬಕ್ಕೆ ಅಷ್ಟೆಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಗೆ ಖುಷಿ ತಂದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇದು ಸಂತೋಷದ ಸಂದರ್ಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುತ್ತಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಶೃದ್ಧಾ ಶೆಟ್ಟರ್, ನನ್ನ ಸ್ಪರ್ಧೆ ಬಗ್ಗೆ ನಾನು ಇನ್ನೂ ಚರ್ಚೆ ಮಾಡಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧವಿದ್ದೇವೆ. ಇನ್ನು ಬೇರೆಯವರಿಗೆ ಟಿಕೆಟ್ ಕೊಟ್ಟರು ಅವರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮ ಕುಟುಂಬಕ್ಕೆ ಸಿಕ್ಕರೂ ಕೆಲಸ ಮಾಡುತ್ತೇವೆ. ಹೈಕಮಾಂಡ್ ಎನೂ ನಿರ್ಧಾರ ತೆಗೆದುಕೊಳ್ಳುತ್ತೆ ಅದಕ್ಕೆ ನಾನು ಬದ್ದ ಎಂದು ಶೃದ್ಧಾ ಶೆಟ್ಟರ್ ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ