ಬೆಳಗಾವಿ- ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಡವಟ್ಟಾಗಿದೆ.ಪ್ರಾಮಾಣಿಕ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡ
ಲಾಗಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರವನ್ನು ದೃಡಪಡಿಸಿ, ಪರೀಕ್ಷೆಯನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.
ಬಿಕಾಂ ಪದವಿಯ ಐದನೇಯ ಸೆಮಿಸ್ಟರ್ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಪರೀಕ್ಷೆಯನ್ನು ರದ್ದು ಪಡಿಸಿ,ವಿಶ್ವವಿದ್ಯಾಲಯದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ