ಬೆಳಗಾವಿ-ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.ಉಳಿದ ಇಪ್ಪತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ,ಐದು ಸೀಟುಗಳು ಘೋಷಣೆ ಆಗಬೇಕಿವೆ,ಈ ಐದು ಸೀಟುಗಳಲ್ಲಿ ಬೆಳಗಾವಿ ಮತ್ತು ಉತ್ತರ ಕನ್ನಡ (ಕಾರವಾರ) ಕ್ಷೇತ್ರಗಳು ಇವೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದೆ ಮಂಗಲಾ ಅಂಗಡಿ ಬದಲು ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಸ್ವತಃ ಮಂಗಲಾ ಅಂಗಡಿ ಅವರೇ ಮಾಹಿತಿ ನೀಡಿದ್ದರು,ಇದಾದ ಬಳಿಕ ಜಗದೀಶ್ ಶೆಟ್ಟರ್ ಗೋ ಬ್ಯಾಕ್ ಎಂದು ಸ್ಥಳಿಯ ಬಿಜೆಪಿ ನಾಯಕರು ಶೆಟ್ಟರ್ ಅವರು ಬೆಳಗಾವಿಯಿಂದ ಸ್ಪರ್ದೆ ಮಾಡಲು ವಿರೋಧ ವ್ಯಕ್ತಪಡಿಸಿದ್ದರು.
ಇಂದು ಮಧ್ಯಾಹ್ನದ ಹೊತ್ತಿಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಆಗಲಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದ್ದು ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಹುತೇಕ ಜಗದೀಶ್ ಶೆಟ್ಟರ್ ಅವರೇ ಫೈನಲ್ ಎನ್ನುವ ಮಾಹಿತಿ ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ಲಭ್ಯವಾಗಿದೆ.
ಪಕ್ಕದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ್ರದ ಬಿಜೆಪಿ ಅಭ್ಯರ್ಥಿ ಯಾರಾಗ್ತಾರೆ, ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಬಿಜೆಪಿ ಹೈಕಮಾಂಡ್ ಕೋಕ್ ಕೊಡಬಹುದಾ ? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಅನಂತಕುಮಾರ್ ಬದಲಿಗೆ ಈ ಕ್ಷೇತ್ರದಿಂದ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.