ಬೆಳಗಾವಿ-ಪೊಲೀಸ್ ಠಾಣೆ ಆವರಣದಲ್ಲಿ ಅನುಮಾಸ್ಪದ ವ್ಯಕ್ತಿಯ ಶವಪತ್ತೆ!ಯಾಗಿದೆ.ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಶವ ಪತ್ತೆಯಾಗಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಅಂದಾಜು 40-45ವರ್ಷದ ವ್ಯಕ್ತಿಯ ಮೃತದೇಹ ಇದಾಗಿದೆ.ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಕ್ಯಾಂಪ್ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊಲೆಯೋ ಅಥವಾ ಅಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರ ತನಿಖೆ ನಡೆಸಿದ್ದಾರೆ.ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹ ರವಾನೆಯಾಗಿದೆ.ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ