ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಎಂಎಲ್ಸಿ ವಿವೇಕ್ ರಾವ್ ಪಾಟೀಲ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.
ಇಂದು ಹುಕ್ಕೇರಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ವಿವೇಕ್ ರಾವ್ ಬಿಜೆಪಿ ಸೇರ್ಪಡೆಯಾಗಲು ರೆಡಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿವೇಕ್ ರಾವ್ ಪಾಟೀಲ ಅವರು ಇತ್ತೀಚಿಗೆ ಬಿಜೆಪಿಗೆ ಬೆಂಬಲ ಸೂಚಿಸಿದ ಬಳಿಕ ವಿವೇಕ್ ರಾವ್ ಪಾಟೀಲ ಅವರೂ ಕೂಡಾ ಬಿಜೆಪಿಗೆ ಸೇರ್ಪಡೆಯಾಗುವದು ಖಚಿತವಾಗಿತ್ತು. ಇಂದು ನಿರೀಕ್ಷೆಯಂತೆ ವಿವೇಕ್ ರಾವ್ ಪಾಟೀಲ ಸಹ ಬಿಜೆಪಿಗೆ ಸೇರ್ಪಡೆ ಆಗ್ತಾರೆ ಎಂದು ತಿಳಿದು ಬಂದಿದೆ.