ಬೆಳಗಾವಿ- ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಸಮೀಪದ ಚಂದನಹೊಸೂರ ಗ್ರಾಮದಲ್ಲಿ ನಡೆದಿದೆ
ಬೆಳಗಾವಿ ತಾಲೂಕಿನ ಚಂದನಹೊಸೂರು ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು ಮೃತ ಬಾಲಕಿ ಚಂದನಹೊಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಲಕ್ಷ್ಮಿಮೋಹನ ಪಾಟೀಲ(೧೪) ಎಂದು ಗುರುತಿಸಲಾಗಿದೆ
ಸಂಜೆ ಬಾವಿಗೆ ನೀರು ತರಲು ಹೋದಾಗ ಈ ದುರ್ಘಟನೆ. ನಡೆದಿದೆ ಎಂದು ತಿಳಿದು ಬಂದಿದೆ
ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ
ರೈತ ಆತ್ಮಹತ್ಯೆಗೆ ಶರಣು.
ಜಮೀನಿನ ಪಕ್ಕದಲ್ಲಿ ರುವ ಹಳ್ಳದಲ್ಲಿ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಹೊಲದಲ್ಲಿ ಹೊಡಿಸಿದ ಬೊರವೆಲ್ ಗೆ ನೀರು ಬೀಳಲಿಲ್ಲ ಅಂತಾ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ
ಸೈಪುರಸಾಬ್ ಗೋರಿಖಾನ (೨೬) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ