ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ.
ಹಲವಾರು ದಿನಗಳಿಂದ ಈ ನರ್ಸ್ ಗೆ ಕೋವೀಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಸೊಂಕು ದೃಡವಾದ ಹಿನ್ನಲೆಯಲ್ಲಿ ರೋಗಿಗಳ ಸೇವೆ ಮಾಡಿದ ನರ್ಸಗೂ ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ಹರಡಿ ಇಂದಿಗೆ ಮೂರು ತಿಂಗಳು ಗತಿಸಿದ್ದು ಇದೇ ಮೊದಲ ಬಾರಿಗೆ ವೈದ್ಯಕೀಯ ಸಿಬ್ಬಂಧಿಗೆ ಸೊಂಕು ತಗಲಿದ್ದು ಕಳವಳಕಾರಿ ಸಂಗತಿಯಾಗಿದೆ.
ನರ್ಸ್ ಗೆ ಸೊಂಕು ತಗಲಿರುವ ಕುರಿತು ಇಂದು ಬೆಳಿಗ್ಗೆ ರಿಪೋರ್ಟ್ ಬಂದಿದ್ದು ಜಿಲ್ಲಾ ಆರೋಗ್ಯ ಅಧಿಕಾರಿಗಳು ದೃಡಪಡಿಸಿದ್ದಾರೆ.