Breaking News

ಸಹಕಾರಿ ಯೂನಿಯನ್ 14 ಸ್ಥಾನಗಳು ಅನ್ ಅಪೋಸ್….!

 

 

 

 

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ

ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ

*ಬೆಳಗಾವಿ*: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯುನಿಯನ್ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ 14 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಒಟ್ಟು 16 ಸ್ಥಾನಗಳಿಗೆ 26 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರಗಳನ್ನು ಹಿಂಪಡೆಯುವ ಕಡೆಯ ದಿನ ಶನಿವಾರದಂದು 7 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದರಿಂದ 14 ಸ್ಥಾನಗಳಿಗೆ ಅವಿರೋಧವಾಗಿ ನಡೆಯಿತು.

ಉಳಿದ 2 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರದಿಂದ ಇದೇ ಶುಕ್ರವಾರದಂದು ಚುನಾವಣೆ ನಡೆಯಲಿದೆ.

ಅವಿರೋಧ ಆಯ್ಕೆ:

ಬಾಲಚಂದ್ರ ಜಾರಕಿಹೊಳಿ ಹೇಳಿದ್ದು…

: ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲೆಯ ಸಚಿವರು, ಶಾಸಕರುಗಳು ಹಾಗೂ ಎಲ್ಲ ಸಹಕಾರಿಗಳ ಸಹಕಾರದಿಂದ ಜಿಲ್ಲಾ ಸಹಕಾರ ಯೂನಿಯನ್‍ಗೆ ಆಡಳಿತ ಮಂಡಳಿಗೆ ಎರಡು ಸ್ಥಾನಗಳು ಹೊರತುಪಡಿಸಿ ಉಳಿದ 14 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅದಕ್ಕಾಗಿ ಎಲ್ಲ ಮಹನೀಯರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಸಹಕಾರಿ ತತ್ವದ ಮೇಲೆ ನಂಬಿಕೆಯನ್ನಿಟ್ಟು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಶ್ರಮಿಸಿರುವ ಜಿಲ್ಲೆಯ ಯಾವತ್ತೂ ಸಹಕಾರಿಗಳಿಗೆ ಆಭಾರಿಯಾಗಿರುವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಈ ಯೂನಿಯನ್‍ಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಹಕಾರ ರಂಗದ ಅಭಿವೃದ್ದಿಗಾಗಿ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. ಎಂದು   -ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ

 

Check Also

ಮದ್ಯರಾತ್ರಿ ಸಾರಾಯಿ ಹುಡುಕಾಡದಿದ್ದರೆ ಅವರು ಸಿಗುತ್ತಿರಲಿಲ್ಲ……!!

ವೈನ್ ಇಸ್ ಇನ್…ಮೈಂಡ್ ಇಸ್ ಔಟ್ ಆತ ಹೇಳ್ತಾರೆ ಅದು ಸತ್ಯ…. ಆತ ಕಂಠಪೂರ್ತಿ ಕುಡುದಿದ್ದ ಬೆಳಗಾವಿಗೆ ಬರಲು ಬಸ್ …

Leave a Reply

Your email address will not be published. Required fields are marked *