ಬೆಳಗಾವಿ- ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಜನೇವರಿಯಿಂದ ಇಲ್ಲಿಯವರೆ ಬೆಳಗಾವಿಯಲ್ಲಿ ಒಟ್ಟು 12 ಜನ ಮೃತಪಟ್ಟಿದ್ದು ಡೆಂಗ್ಯು ನಗರದಲ್ಲಿ ಈಗ ವ್ಯಾಪಕವಾಗಿದ್ದು ನೂರಾರು ಜನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಇಲಾಖೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಮುಖೇನ ಮನೆ,ಮನೆಗೆ ತೆರಳಿ ಲಾರ್ವಾ ಸರ್ವೆ ಮಾಡುತ್ತಿದೆ. ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ನಗರದಾದ್ಯಂತ ಫಾಗೀಂಗ್ ಮಾಡಿಸುವದು ಅತ್ಯಗತ್ಯವಾಗಿದ್ದು ಈ ಕುರಿತು ಬೆಳಗಾವಿ ಜಿಲ್ಲಾಡಳಿತ ಎಚ್ಚೆತ್ತು ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ಜಂಟಿ ಸಭೆ ಕರೆದು ಡೆಂಗ್ಯು ಕುರಿತು ಮುಂಜಾಗ್ರತೆ ವಹಿಸಬೇಕಾಗಿದೆ.
ಇಂದು,ಬೆಳಗಾವಿಯ ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಶನಿವಾರ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾನೆ.ಪ್ರಸಾದ ಕಳೆದ ಕೆಲದಿನಗಳಿಂದ ಡೆಂಗ್ಯು ರೋಗಕ್ಕೆ ತುತ್ತಾಗಿದ್ದರು.
ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರು ಅಜ್ಜಿ, ತಂದೆ, ಪತ್ನಿ, ಪುತ್ರನನ್ನು ಅಗಲಿದ್ದಾರೆ.