ಬೆಳಗಾವಿ: ಸ್ಥಳೀಯ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆದರೆ, ನಾಲ್ಕು ಸ್ಥಾನಕ್ಕೆ ನಾಲ್ಕೇ ಉಮೇದುವಾರಿಕೆ ಸಲ್ಲಿಕೆಯಾದ್ದರಿಂದ ಎಲ್ಲ ಅಧ್ಯಕ್ಷರೂ ಅವಿರೋಧವಾಗಿ ಆಯ್ಕೆಗೊಂಡರು.
ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ ಆಯ್ಕೆಗೊಂಡರು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಷ್ಮಾ ಕಾಮಕರ ಆಯ್ಕೆ ಮಾಡಲಾಯಿತು.
ಮುಂದಿನ ವರ್ಷ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರೋ ಕಾರಣ, ಕಮಲ ಪಾಳಯದಲ್ಲಿರೋ ಹಲವು ಹಿರಿಯ ಸದಸ್ಯರು ಸ್ಥಾಯಿ ಸಮಿತಿ ಅಧ್ಯಕ್ಷರಾಗುವ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಟ್ಟರು.