ಬೆಳಗಾವಿ, ): ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜತೆಗಿದ್ದರು.
ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಪರಿಶೀಲಿಸಿದರು.ತಾಲೂಕಿನಲ್ಲಿನ ಕುಸುಮಳಿ ಗ್ರಾಮದಲ್ಲಿನ ಸೇತುವೆ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನವನ್ನು ನೀಡಿದರು.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ