ಆಥಣಿಸಿ.ಎಮ್. ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ.ಸಿ.ಎಮ್. ನೋಡಲು ಹೋಗಿ ವಿದ್ಯುತ್ ಶಾಕ್ ಹೊಡೆಸಿಕೊಂಡ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಹೇಶ್ ಹುಣ್ಣರಗಿ 22 ವರ್ಷ ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ವೇಳೆ ಈ ಅವಘಡ ಸಂಭವಿಸಿದೆ.
ಮುಖ್ಯಮಂತ್ರಿ ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ ಯುವಕ ಮಹೇಶ್ ಎಂಬಾತನಿಗೆ,ವಿದ್ಯುತ್ ತಗುಲಿ ಮುಖ, ಕೈ ಭಾಗಕ್ಕೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಯುವಕ ಹಮೇಶ್ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿದ್ದ ಅಂಬುಲೆನ್ಸ ಸಹಾಯದಿಂದ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ