Breaking News

ಕಾರ್ಮಿಕನ ದೇಹದ ಅವಶೇಷ,ಮಣ್ಣಿನ ಮಡಕೆಯಲ್ಲಿ ಹಸ್ತಾಂತರ….!!

ಬೆಳಗಾವಿಯ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾತಂತರ ಮಾಡಲಾಗಿದೆ.ಮಣ್ಣಿನ ಮಡಕೆಯನ್ನು ಮೃತ ಕಾರ್ಮಿಕನ ತಂದೆ ಕೈ ಚೀಲದಲ್ಲಿ ಹಾಕಿಕೊಂಡು ಹೋಗಿರುವ ದೃಶ್ಯವನ್ನು ಯಾರಿಂದಲೂ ನೋಡಲು, ಸಹಿಸಲು ಸಾಧ್ಯವಿಲ್ಲ.

ಅಗ್ನಿ ದುರಂತ: ಮೃತ‌ ಕಾರ್ಮಿಕನ‌ ದೇಹದ ಅವಶೇಷ ಮಣ್ಣಿನ ಮಡಕೆಯಲ್ಲಿ ಕುಟುಂಬಕ್ಕೆ ಹಸ್ತಾಂತರ

ಬೆಳಗಾವಿ, – ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಸಂಭವಿಸಿದ ಅಗ್ನಿ‌ ದುರಂತದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ದೇಹವು ಸಂಪೂರ್ಣ ಸುಟ್ಟು‌ ಬೂದಿಯಾಗಿತ್ತು.

ಈ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ತಂಡವು ಹಿರಿಯ ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ಮೃತ ಕಾರ್ಮಿಕ ಯಲ್ಲಪ್ಪನ ದೇಹದ ಅವಶೇಷಗಳನ್ನು ಮುಂದಿನ ಕ್ರಿಯಾಕರ್ಮಗಳಿಗೆ ಅನುಕೂಲವಾಗುವಂತೆ ಸಂಪ್ರದಾಯದಂತೆ ಮಣ್ಣಿನ‌ ಮಡಿಕೆಯಲ್ಲಿ ಹಾಕಿ ತಂದೆಯವರಿಗೆ ಹಸ್ತಾಂತರಿಸಲಾಗಿತ್ತು.

ಮಣ್ಣಿನ ಮಡಕೆಯಲ್ಲಿ ನೀಡಲಾಗಿದ್ದರೂ ಮಳೆ ಬರಬಹುದು ಎಂಬ ಕಾರಣಕ್ಕೆ ಮಡಕೆಯನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿಟ್ಟುಕೊಂಡು ತರಲಾಯಿತು ಎಂದು ಮೃತ ಕಾರ್ಮಿಕ ಯಲ್ಲಪ್ಪನವರ ತಂದೆ ಸ್ವತಃ ತಿಳಿಸಿರುತ್ತಾರೆ.

ಬೆಳಿಗ್ಗೆ 6 ಗಂಟೆಗೆ ಕುಟುಂಬದ ಸದಸ್ಯರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ದುರಂತ ಘಟನೆಯ ನಡೆಯುವ ವೇಳೆ ಕಾರ್ಮಿಕ‌ ಲಿಫ್ಟ್ ಬಳಿ ಇದ್ದ ಬಗ್ಗೆ ಸಹೋದ್ಯೋಗಿಗಳು ತಿಳಿಸಿದ್ದರು.ಆ ಪ್ರಕಾರ ಕಾರ್ಯಾಚರಣೆ ನಡೆಸಿದ ತಂಡವು ಬೆಳಿಗ್ಗೆ 10 ಗಂಟೆಯ ವೇಳೆಗೆ ಸುಟ್ಟು ಬೂದಿಯಾಗಿದ್ದ ಕಾರ್ಮಿಕನ ದೇಹದ ಅವಶೇಷಗಳನ್ನು ಪತ್ತೆ ಮಾಡಿತು.

ಇದಾದ ಬಳಿಕ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ಕೈಗೊಂಡು ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 12.30 ಗಂಟೆಗೆ ಡಿಸಿಪಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿಯೇ ದೇಹದ ಅವಶೇಷಗಳನ್ನು ಮಣ್ಣಿನ ಮಡಕೆಯಲ್ಲಿ ನೀಡಲಾಗಿರುತ್ತದೆ ಎಂದು ಮೃತ ಕಾರ್ಮಿಕನ ತಂದೆ ಸ್ವತಃ ಸ್ಪಷ್ಟಪಡಿಸಿರುತ್ತಾರೆ.
****

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *