Breaking News

ಹಿಂಡಲಗಾ ಜೈಲಿನಲ್ಲಿ ಮಾರ್ನೀಂಗ್ ಶಾಕ್….ಬಿಗ್ ರೇಡ್…!!

ಬೆಳಗಾವಿ: ಹಲವು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ಬೆಳಗಾವಿ ಕೇಂದ್ರ ಕಾರಾಗೃಹದ ಮೇಲೆ ಬೆಳ್ಳಂಬೆಳಿಗ್ಗೆ ಮಹಾನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಹೌದು, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಜೈಲಿನ ಮೇಲೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ‌.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿ 260ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ದಾಳಿಯಲ್ಲಿ ಭಾಗಿಯಾಗಿದ್ದರು.

ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹಿಟರ್ ವೈಯರ್ ಬಂಡಲ್, ಎಲೆಕ್ಟ್ರಿಕಲ್ ಒಲೆ ಸೇರಿ ಮತ್ತಿತರ ವಸ್ತುಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

. Today from around 5am in the morning a jail raid was carried out under honorable leadership of Commisioner sir. A total of 40 officers of all ranks and 220+ men carried out this raid in the hindalga jail.
Three knives,10 tobacco sachets,One ciggerate,small heater wire bundle, bricks lectric makeshift stove was seized. Case has been registered in BRPS.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *