ಬೆಂಗಳೂರು: ಸಿಎಂ ಸಿದ್ರಾಮಯ್ಯ ಈಗ ಬಿಜೆಪಿ ಚಕ್ರ ವ್ಯೂಹದಲ್ಲಿ ಸಿಲುಕಿದ್ದಾರೆ.ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿದೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಒಂದನ್ನು ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ದೂರನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿಕೊಂಡರೂ, ಕಾನೂನುಬದ್ಧವಾಗಿಯೇ ಪಡೆದಿದ್ದೇನೆ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ 14 ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಸ್ಪಷ್ಟವಾಗಿದೆ ಎಂದಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯನವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ