ಬೆಳಗಾವಿ-ಐತಿಹಾಸಿಕ ಕಿತ್ತೂರು ಉತ್ಸವದ 200ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ತೀಮ್ ಪಾರ್ಕ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು ₹ 40 ಕೋಟಿ ಕಾಮಗಾರಿಗೆ ಅನುಮೋದನೆ ನೀಡಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಭೈರೇಗೌಡ ಅನುದಾನ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅವರ ಕೋರಿಕೆಗೆ ಸ್ಪಂದಿಸಿದ ಸಚಿವರು, ₹ 35 ಕೋಟಿ ಅನುದಾನ ಬಿಡುಗಡೆಗೊಳಿಸಿ, ಕಿತ್ತೂರಿನ ಕೋಟೆ ಆವರಣಧಲ್ಲಿರುವ 7 ಎಕರೆ ಜಾಗದಲ್ಲಿ ಭವ್ಯವಾದ ತೀಮ್ ಪಾರ್ಕ್ ನಿರ್ಮಿಸಲು ಸೂಚನೆ ನೀಡಿದರು.
ಕಿತ್ತೂರು ಉತ್ಸವಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ₹ 5 ಕೋಟಿ ಹೀಗೆ ಒಟ್ಟು ₹ 40 ಕೋಟಿ ಕಾಮಗಾರಿಗೆ ಅನುಮೋದನೆ ನೀಡಿ, ಅನುದಾನ ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಅಪ್ಪಾಸಾಹೇಬ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಪಂ ಸಿಇಓ ರಾಹುಲ ಶಿಂಧೆ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.