ಬೆಳಗಾವಿ
ನಡು ರಸ್ತೆಯಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿ.
ಕೆಲಸದ ನಿಮಿತ್ತವಾಗಿ ಸೋಮವಾರ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ಮೋಹನ, ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.
ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿತ್ತಾದರು, ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಗಾರಕಕ್ಕೆ ಮೃತದೇಹ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ